ನನ್ನ ಅಜ್ಜಿ ಸಂಕಷ್ಟದಲ್ಲಿದ್ದಾಗ ಜಿಲ್ಲೆಯ ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು. ಈಗ ಕಾಂಗ್ರೆಸ್ (Congress) ಕಷ್ಟದ ಸಮಯದಲ್ಲಿದೆ. ರಾಜ್ಯದ ಜನ ಕಾಂಗ್ರೆಸ್ ಕೈ ಹಿಡಿಯಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ (Priyanka Gandhi) ಮನವಿ ಮಾಡಿದರು.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೃಹತ್ ಬಹಿರಂಗ ಸಮಾವೇಶದಲ್ಲಿ ಕೈ ಅಭ್ಯರ್ಥಿ ಟಿ.ಡಿ.ರಾಜೇಗೌಡ ಪರ ಮತಯಾಚನೆ ಮಾತನಾಡಿದ ಅವರು, ಕಷ್ಟದಲ್ಲಿದ್ದಾಗ ಜಿಲ್ಲೆಯ ಜನ ನನ್ನ ಅಜ್ಜಿಯ ಕೈ ಹಿಡಿದಿದ್ದರು. ಈಗಲೂ ನಮ್ಮ ಕುಟುಂಬ ಸಂಕಷ್ಟದಲ್ಲಿದೆ. ನಾನು ಚಿಕ್ಕಮಗಳೂರನ್ನ ಎಂದಿಗೂ ಮರೆಯೋದಿಲ್ಲ ಎಂದರು.