ವಿಧಾನ ಪರಿಷತ್ ಸದಸ್ಯತ್ವ (MLC) ಸ್ಥಾನಕ್ಕೆ ರಾಜೀನಾಮೆ ನೀಡಲು ಮಾಜಿ ಸಚಿವ ಆರ್.ಶಂಕರ್ (R Shankar) ನಿರ್ಧರಿಸಿದ್ದಾರೆ.
ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬುಧವಾರ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಅತ್ತ ಕಾಂಗ್ರೆಸ್ ಟಿಕೆಟ್ಗೂ ಪ್ರಯತ್ನ ಪಟ್ಟು ನಿರಾಸೆಯಾಗಿದೆ. ಇತ್ತ ಬಿಜೆಪಿ ಟಿಕೆಟ್ ಕೂಡಾ ಮಿಸ್ ಆಗಿದೆ. ಹೀಗಾಗಿ ಶಂಕರ್ ಬೇಸರಗೊಂಡಿದ್ದಾರೆ ಎಂದು ಅವರು ಆಪ್ತ ಮೂಲಗಳು ಮಾಹಿತಿ ನೀಡಿವೆ.
ಆರ್ ಶಂಕರ್ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಅದೀಕೃತವಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ. ನಾಳೆ ಬೆಂಗಳೂರಿನಿಂದ ರಾಣೇಬೆನ್ನೂರಿಗೆ ವಾಪಸ್ ಆಗಲಿದ್ದಾರೆ.