ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀರ್ಪಿನ ವಿರುದ್ಧ ಸೋಮವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಸೂರತ್ನ ಸೆಷನ್ಸ್ ಕೋರ್ಟ್ನಲ್ಲಿ ರಾಹುಲ್ ಗಾಂಧಿ ಪರ ಅವರ ಕಾನೂನು ತಂಡ ಸೂರತ್ನ ಮೆಟ್ರೋಪಾಲಿಟಿನ್ ಕೋರ್ಟ್ನ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ.
ಮಾನನಷ್ಟ ಪ್ರಕರಣದಲ್ಲಿ ಮೆಟ್ರೋಪಾಲಿಟಿನ್ ಕೋರ್ಟ್ ನೀಡಿರುವ ತೀರ್ಪಿಗೆ ತಡೆ ನೀಡುವಂತೆ ಒಂದು ಅರ್ಜಿ, ಮತ್ತು ಶಿಕ್ಷೆಯನ್ನು ರದ್ದುಗೊಳಿಸುವಂತೆ ಮತ್ತೊಂದು ಅರ್ಜಿಯನ್ನು ರಾಹುಲ್ ಗಾಂಧಿ ಪರ ವಕೀಲರು ಸೂರತ್ನ ಸೆಷನ್ಸ್ ಕೋರ್ಟ್ಗೆ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರ ಅರ್ಜಿಗಳನ್ನು ವಿಚಾರಣೆ ನಡೆಸಿರುವ ಸೆಷನ್ಸ್ ನ್ಯಾಯಾಲಯ ರಾಹುಲ್ ಗಾಂಧಿ ಅವರ ಜಾಮೀನು ಅವಧಿಯನ್ನು ಏಪ್ರಿಲ್ 13ರವರೆಗೂ ವಿಸ್ತರಣೆ ಮಾಡಿದೆ. ಏಪ್ರಿಲ್ 13ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.