ಇಂದು ಕಾಫಿನಾಡಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ರೋಡ್ ಶೋ ನಡೆಸಿ, ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ (HD Tammaiah)ಅವರ ಪರ ಮತಯಾಚನೆ ಮಾಡಲಿದ್ದಾರೆ. ಕೆಇಬಿ ಸರ್ಕಲ್ ನಿಂದ ಅಜಾದ್ ಪಾರ್ಕ್ ಸರ್ಕಲ್ವೆರೆಗೂ ರೋಡ್ ಶೋ ನಡೆದು, ಕೊನೆಗೆ ಆಜಾದ್ ಪಾರ್ಕ್ನಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ರೋಡ್ ಶೋ ನಲ್ಲಿ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದ್ದು, ಬಿಜೆಪಿ ಭದ್ರಕೋಟೆಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.