ನ್ಯಾಷನಲ್ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಒಂದರ ಹಿಂದೊದಂರಂತೆ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದೀಗ ಟಾಲಿವುಡ್ ನಟ ನಿತಿನ್ ಜೊತೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದುಸಿನಿಮಾಗೆ ಮುಹೂರ್ತ ಕೂಡ ನೆರವೇರಿದೆ.
ರಶ್ಮಿಕಾ ಹಾಗೂ ನಿತಿನ್ ನಟನೆಯ ಸಿನಿಮಾದ ಮುಹೂರ್ತಕ್ಕೆ ತೆಲುಗು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ಹೊಸ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ರಶ್ಮಿಕಾ ಮತ್ತು ನಿತಿನ್ ಜೊತೆಯಾಗಿ ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದ್ದು ಈ ಮೊದಲು ಈ ಜೋಡಿ ‘ಭೀಷ್ಮ’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು.