ಕರ್ನಾಟಕ SSLC ಫಲಿತಾಂಶ 2023 (Karnataka SSLC Result 2023) ಮೇ ಮೊದಲ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 (Karnataka 2nd PUC Results) ಇಂದು (April 21) ಪ್ರಕಟವಾಗಿದ್ದು, ವಿದ್ಯಾರ್ಥಿಗಳು (Students) ಈಗ 10ನೇ ತರಗತಿಯ ಫಲಿತಾಂಶ ಬಿಡುಗಡೆಗಾಗಿ ಕಾಯುತ್ತಿದ್ದಾರೆ. SSLC ಫಲಿತಾಂಶ ಕರ್ನಾಟಕ 2023 ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುವುದು. karresults.nic.in ಮತ್ತು kseab.karnataka.gov.in. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.