ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಶಿವಣ್ಣ ಹೇಳಿದ್ದಾರೆ. ‘ಬಂಗಾರಪ್ಪ ಅವರ ಮಕ್ಕಳಾದ ಮಧು ಬಂಗಾರಪ್ಪ ಹಾಗೂ ಗೀತಾರಿಗೆ ರಾಜಕೀಯದ ಬಗ್ಗೆ ಹೇಳಿಕೊಡೊದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿ ಗೀತಾ ನೋಡಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್ ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಪತ್ನಿಯ ಕುರಿತು ಶಿವಣ್ಣ ಮಾತನಾಡಿದ್ದಾರೆ.