ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ನಟಿ ರಮ್ಯಾ (Actor Ramya) ಮತ್ತು ನಟ ದುನಿಯಾ ವಿಜಯ್ (Duniya Vijay) ಬರುತ್ತಾರೆ. ಆದ್ರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವ ಪ್ಲಾನ್ ಇಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಅವರು, ಸಿದ್ದರಾಮಯ್ಯ (Siddaramaiah) ಅವರು ಮೇ 4 ರಿಂದ ಮೈಸೂರಿನಲ್ಲೇ (Mysuru) ಇದ್ದು ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ.