ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ. ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿದ್ದಾರೆ. ದೇವನಹಳ್ಳಿ ಎಸ್ ಸಿ ಕ್ಷೇತ್ರದಿಂದ ಹೆಚ್.ಸಿ.ಮುನಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
