ಚುನಾವಣಾ ಜ್ವರದ ಮಧ್ಯೆ ಇಂದಿನಿಂದ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಶುರುವಾಗುತ್ತಿವೆ. ಮೊದಲ ದಿನವಾದ ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ. ಸುಗಮ ಪರೀಕ್ಷೆಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 3305 ಕೇಂದ್ರಗಳಲ್ಲಿ ಏಪ್ರಿಲ್ 15 ರವರೆಗೂ ಪರೀಕ್ಷೆ ನಡೆಯಲಿದೆ. ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇರಲ್ಲ. ಹಿಜಬ್ ಕಾರಣಕ್ಕೆ ಎಕ್ಸಾಂ ಗೈರಾದ್ರೆ ವಿಶೇಷ ಪರೀಕ್ಷೆಗೆ ಅವಕಾಶ ಇಲ್ಲ. ಮತ್ತೆ ಪೂರಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು.