ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಿಲ್ಲುತ್ತೇನೆ. ಅವರಿಗೆ ನನ್ನ ಬೆಂಬಲ ಇದೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಈ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.
ಬೆಂಗಳೂರಿನ ಹೋಟೆಲ್ ಅಶೋಕದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೀತಿಯ ವ್ಯಕ್ತಿಯ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಬಂದಿದ್ದೇನೆ. ಸಿನಿಮಾಗೆ ಎಂಟ್ರಿ ಕೊಟ್ಟಾಗ ಯಾರೂ ಗಾಡ್ ಫಾದರ್ ಇರಲಿಲ್ಲ. ನಾನು ಸಿನಿಮಾ ಎಂಟ್ರಿ ಕೊಟ್ಟಾಗ ಬೊಮ್ಮಾಯಿ ರಾಜಕೀಯಕ್ಕೆ ಬಂದರು. ಆ ವ್ಯಕ್ತಿ ಪರವಾಗಿ ನಾನು ಬೆಂಬಲ ಕೊಡುತ್ತೇನೆ ಎಂದು ಹೇಳಿದರು.