ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 19 ರ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಚಿತ್ರನಟ ಸುದೀಪ್ ಸೇರಿದಂತೆ ಹಲವು ಸಿನಿ ತಾರೆಯರು ಭಾಗಿಯಾಗಲಿದ್ದಾರೆ. ನಾಮಪತ್ರ ಸಲ್ಲಿಕೆ ಮುಗಿದ ಬಳಿಕ ನಟ ಕಿಚ್ಚ ಸುದೀಪ್ ಅವರು ರಾಜ್ಯಾದ್ಯಂತ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
