ಜಿ.ಎನ್. ನಂಜುಂಡಸ್ವಾಮಿ ಈ ಬಾರಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಪರವಾಗಿ ಪ್ರಚಾರ ಮಾಡಲು ಕಿಚ್ಚ ಕೊಳ್ಳೇಗಾಲಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾತನ್ನು ಶಾಸಕ ಎನ್. ಮಹೇಶ್ ಪದೇ ಪದೇ ಹೇಳುತ್ತಿದ್ದಾರಂತೆ. ಇವರಿಗೆ ಟಾಂಗ್ ಕೊಡುವುದಕ್ಕಾಗಿಯೇ ಲೋಕೇಶ್ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾತನಾಡಿರುವ ಲೋಕೇಶ್, ‘ಎನ್.ಮಹೇಶ್ ಅವರು ಪದೇ ಪದೇ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೊಂಡು, ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ’ ಎಂದು ಮಾತನಾಡಿದ್ದಾರೆ. ಈ ಮಾತುಗಳು ಸುದೀಪ್ ಅಭಿಮಾನಿಗಳನ್ನು ಕೆರಳಿಸಿದ್ದು, ಲೋಕೇಶ್ ಕ್ಷಮೆ ಕೇಳಬೇಕು ಎಂದು ಅಭಿಮಾನಿಗಳು ಪಟ್ಟ ಹಿಡಿದಿದ್ದಾರೆ.