ಬಿ ಫಾರಂ ಸಲ್ಲಿಕೆ ಮಾಡದ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ತಿರಸ್ಕೃತಗೊಂಡಿದೆ. ಕನಕಪುರ ‘ಕಾಂಗ್ರೆಸ್’ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಮಪತ್ರ ತಿರಸ್ಕೃತ ಆತಂಕದಲ್ಲಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ರಾಮನಗರ ಜಿಲ್ಲೆಯಲ್ಲಿ 68 ನಾಮಪತ್ರ ಕ್ರಮಬದ್ದವಾಗಿದ್ದು, 16 ನಾಮಪತ್ರ ತಿರಸ್ಕೃತಗೊಂಡಿವೆ.
ಜಿಲ್ಲೆಯ ಕನಕಪುರ ಕ್ಷೇತ್ರದಿಂದ ಸಂಸದ ಡಿ.ಕೆ ಸುರೇಶ್ ನಾಮಪತ್ರವನ್ನು ಸಲ್ಲಿಸಿದ್ದರು. ಡಿ.ಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆ ಮುಂಜಾಗೃತವಾಗಿ ಡಿ.ಕೆ ಸುರೇಶ್ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು. ಡಿಕೆಶಿ ನಾಮಪತ್ರ ಅಂಗೀಕಾರವಾಗಿದ್ದು, .ಕೆ ಸುರೇಶ್ ನಾಮಪತ್ರ ತಿರಸ್ಕ್ರತವಾಗಿದೆ. ಏಪ್ರಿಲ್ 17ರಂದು ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದರು.